ಕರ್ನಾಟಕ

ಸಿಇಟಿಯಲ್ಲಿ ರಾಜ್ಯಕ್ಕೆ 32ನೇ ರ್ಯಾಂಕ್ ಪಡೆದ ಅಸೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಲಹರಿ ಶೆಟ್ಟಿ

ಮೂಲಕ News Desk | ಪ್ರಕಟಿಸಲಾಗಿದೆ June 6, 2026 June 6, 2026 | 01:31 PM 82 ವೀಕ್ಷಣೆಗಳು

ಪಬ್ಲಿಕ್ ರೈಡ್ ನ್ಯೂಸ್ | ಪೀಣ್ಯ-ದಾಸರಹಳ್ಳಿ


2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಎಂಜಿನಿಯರಿಂಗ್ ವಿಭಾಗದ ಫಲಿತಾಂಶದಲ್ಲಿ ಹೆಸರಘಟ್ಟ ಮುಖ್ಯರಸ್ತೆಯ ಅಸೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ **ಲಹರಿ ಶೆಟ್ಟಿ** ಅವರು ರಾಜ್ಯ ಮಟ್ಟದಲ್ಲಿ **32ನೇ ರ್ಯಾಂಕ್** ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.


ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರು ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಕಾಲೇಜಿನ ಪ್ರಾಂಶುಪಾಲ **ಬಿ.ಎಂ. ವೆಂಕಟೇಶ**, "ಲಹರಿ ಶೆಟ್ಟಿ ಅವರ ಸಮರ್ಪಣೆ, ಕಠಿಣ ಪರಿಶ್ರಮ ಹಾಗೂ ನಿರಂತರ ಅಧ್ಯಯನದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ. ಅವರ ಈ ಸಾಧನೆ ಅಸೆಂಟ್ ಪಿಯು ಕಾಲೇಜು ಕುಟುಂಬಕ್ಕೆ ಅಪಾರ ಹೆಮ್ಮೆ ತಂದಿದ್ದು, ಇತರ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗಿದೆ" ಎಂದು ಹೇಳಿದರು.


"ಲಹರಿ ಅವರ ಮುಂದಿನ ಶೈಕ್ಷಣಿಕ ಜೀವನದಲ್ಲಿಯೂ ಇದೇ ರೀತಿಯ ಯಶಸ್ಸು ದೊರೆಯಲಿ. ಅವರು ಇನ್ನಷ್ಟು ಉನ್ನತ ಸಾಧನೆಗಳ ಮೂಲಕ ಕಾಲೇಜು ಹಾಗೂ ರಾಜ್ಯದ ಹೆಸರನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿ" ಎಂದು ಶುಭ ಹಾರೈಸಿದರು.


ವಿದ್ಯಾರ್ಥಿನಿಯ ಈ ಸಾಧನೆಯು ಕಾಲೇಜಿನ ಗುಣಮಟ್ಟದ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಪರಿಶ್ರಮಕ್ಕೆ ಮತ್ತೊಂದು ಉತ್ತಮ ಉದಾಹರಣೆಯಾಗಿದೆ.


ವರದಿ: ಪಬ್ಲಿಕ್ ರೈಡ ದೇವರಾಜ್