ಕರ್ನಾಟಕ

ಕೆ.ಪಿ.ಸಿ.ಸಿ ಕಾರ್ಮಿಕ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹೆಗ್ಗನಹಳ್ಳಿ ಮುಖಂಡ ಬ.ನಾ.ರವಿ ನೇಮಕ.

ಮೂಲಕ News Desk | ಪ್ರಕಟಿಸಲಾಗಿದೆ July 10, 2026 July 10, 2026 | 01:04 PM 109 ವೀಕ್ಷಣೆಗಳು

ಪಬ್ಲಿಕ್ ರೈಡ್ ಸುದ್ದಿ ಪೀಣ್ಯ ದಾಸರಹಳ್ಳಿ : ಕೆ.ಪಿ.ಸಿ.ಸಿ ಅಧ್ಯಕ್ಷರಾದ ಬಿ.ಕೆ.ಹರಿ ಪ್ರಸಾದ್ ರವರ ಆದೇಶದ ಮೇರೆಗೆ, ಕುಣಿಗಲ್ ಕ್ಷೇತ್ರದ ಶಾಸಕರಾದ ಡಾ. ಹೆಚ್.ಡಿ ರಂಗನಾಥ್ ರವರ ಶಿಫಾರಸ್ಸಿನ ಮೇರೆಗೆ ಕೆ.ಪಿ.ಸಿ.ಸಿ ಕಾರ್ಮಿಕ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಬ.ನಾ.ರವಿ ರವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ ಪುಟ್ಟಸ್ವಾಮಿಗೌಡ ನೇಮಕಾತಿ ಆದೇಶ ಪತ್ರ

ನೀಡಿದರು.


ಈ ವೇಳೆ ಮಾತನಾಡಿದ ಬ ನಾ ರವಿ ರಾಜಕೀಯ ಗುರುಗಳಾದ ಶಾಸಕ ಡಾ. ಹೆಚ್. ಡಿ. ರಂಗನಾಥ್ ಹಾಗೂ ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷ ಕೆ‌.ಪುಟ್ಟಸ್ವಾಮಿಗೌಡರಿಗೆ ಅಭಾರಿಯಾಗುತ್ತೆನೆ ನಾನು ಕಳೆದ18- 20 ವರ್ಷಗಳಿಂದ ನಾನು ನಮ್ಮ ಕುಟುಂಬ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿಯುತ್ತಿದ್ದು ಕಾಂಗ್ರೆಸ್ ಕಟ್ಟಾಳು ನಮ್ಮ ದೊಡ್ಡಪ್ಪ ಬಿ ವಿ ಪುಟ್ಟರಾಮೇಗೌಡ್ರು ಸಹ ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸಿದವರು ನಾನು ವಯಕ್ತಿಕ ವಾಗಿ ಈಗಾಗಲೇ ಮೂರು ಚುನಾವಣೆಯನ್ನು ಒಂದು ಎಪಿಎಂಸಿ ಒಂದು ತಾಲೂಕು ಪಂಚಾಯಿತಿ ಒಂದು ಗ್ರಾಮ ಪಂಚಾಯಿತಿ ಹಾಗೂ ನಮ್ಮ ತಾಯಿ ನಾಲ್ಕು ಬಾರಿ ಬಂಡಿಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ ಇಂತಹ ನಿಷ್ಠಾವಂತ ಕಾಂಗ್ರೆಸ್ ಕುಟುಂಬಕ್ಕೆ ಹೆಚ್ಚಿನ ಶಕ್ತಿಯನ್ನು ನೀಡಿದಂತವರಿಗೆ ಧನ್ಯವಾದಗಳು, ತಮಗೆ ವಹಿಸಲಾಗಿರುವ ಹೊಣೆಗಾರಿಕೆಯನ್ನು ನಿಷ್ಠೆಯಿಂದ ನಿರ್ವಹಿಸುತ್ತಾ, ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ದಾಸರಹಳ್ಳಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸ್ಥಳೀಯ ನಾಯಕರುಗಳ ಸಹಕಾರದೊಂದಿಗೆ ತಮಗೆ ನೀಡಲಾಗಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ. ಪಕ್ಷದ ಸಂಘಟನೆಗೆ ಹಾಗೂ ಕಾರ್ಮಿಕರ ಏಳಿಗೆಗಾಗಿ ಶ್ರಮಿಸುತ್ತನೆ ಎಂದರು.


ಈ ಸಂಧರ್ಭದಲ್ಲಿ ಉಮೇಶ್, ಸವಿತಾ, ಸಲ್ಮಾ ,ಶಿಲ್ಪಾ ರಾಣಿ, ರಮಿಜ್ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.


ವರದಿ : ಪಬ್ಲಿಕ್ ರೈಡ್ ದೇವರಾಜ್