ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬರನ್ನು ನಡು ರಸ್ತೆಯಲ್ಲೇ ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಸಂಚಲನ ಮೂಡಿಸಿದೆ.
ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದೇಶ್ವರ ಪಾರ್ಕ್ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಘಟನೆಯ ದೃಶ್ಯಗಳ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ಕಾರಣವೇನು ಹಾಗೂ ಮೃತ ವ್ಯಕ್ತಿಯ ಗುರುತು ಸೇರಿದಂತೆ ಘಟನೆಯ ಸಂಪೂರ್ಣ ವಿವರಗಳು ಸದ್ಯಕ್ಕೆ ಲಭ್ಯವಾಗಿಲ್ಲ.
ಹತ್ಯೆ ನಡೆಸಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ತೀವ್ರ ಶೋಧಕಾರ್ಯ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯ ಬಳಿಕವಷ್ಟೇ ಲಭ್ಯವಾಗಬೇಕಿದೆ.
ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡೆದ ಬರ್ಬರ ಹತ್ಯೆ ಪ್ರಕರಣ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.