ಕರ್ನಾಟಕ

ಹುಬ್ಬಳ್ಳಿ-ಧಾರವಾಡದ ನೂತನ ಪೊಲೀಸ್ ಕಮಿಷನರ್ ಆಗಿ ಭೂಷಣ್ ಗುಲಾಬ್ರಾವ್ ಬೋರಸೆ ಅಧಿಕಾರ ಸ್ವೀಕಾರ

ಮೂಲಕ News Desk | ಪ್ರಕಟಿಸಲಾಗಿದೆ September 3, 2026 September 3, 2026 | 09:29 AM 79 ವೀಕ್ಷಣೆಗಳು

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಐಪಿಎಸ್ ಅಧಿಕಾರಿ ಭೂಷಣ್ ಗುಲಾಬ್ರಾವ್ ಬೋರಸೆ ಅವರು ಇಂದು ಹುಬ್ಬಳ್ಳಿಗೆ ಆಗಮಿಸಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.


ರಾಜ್ಯ ಸರ್ಕಾರದ ವರ್ಗಾವಣೆ ಆದೇಶದ ಹಿನ್ನೆಲೆಯಲ್ಲಿ ಬೆಳಗಾವಿ ನಗರದ ಉಪ ಪೊಲೀಸ್ ಮಹಾನಿರೀಕ್ಷಕ ಹಾಗೂ ಪೊಲೀಸ್ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭೂಷಣ್ ಗುಲಾಬ್ರಾವ್ ಬೋರಸೆ ಅವರನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿತ್ತು.


ಇದೀಗ ಹುಬ್ಬಳ್ಳಿಗೆ ಆಗಮಿಸಿದ ಅವರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳು ನೂತನ ಕಮಿಷನರ್ ಅವರನ್ನು ಸ್ವಾಗತಿಸಿದರು.


ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ನಿಯಂತ್ರಣ, ಮಾದಕ ವಸ್ತುಗಳ ಅಕ್ರಮಕ್ಕೆ ಕಡಿವಾಣ ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಪೊಲೀಸ್ ಸಂಪರ್ಕ ಸೇರಿದಂತೆ ಹಲವು ಸವಾಲುಗಳು ನೂತನ ಪೊಲೀಸ್ ಕಮಿಷನರ್ ಅವರ ಮುಂದಿವೆ.


ಇದಕ್ಕೂ ಮುನ್ನ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್. ಶಶಿಕುಮಾರ್, ಐಪಿಎಸ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು. ಅವರ ಸ್ಥಾನಕ್ಕೆ ಇದೀಗ ಭೂಷಣ್ ಗುಲಾಬ್ರಾವ್ ಬೋರಸೆ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.