ಪಬ್ಲಿಕ್ ರೈಡ್ ನ್ಯೂಸ್ : ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಅಬ್ಬಿಗೆರೆಯ ಪೈಪ್‌ಲೈನ್ ರಸ್ತೆ ಪಿಳ್ಳಪ್ಪ ಸರ್ಕಲ್‌ನಲ್ಲಿ ಶ್ರೀ ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಶಾಸಕ ಎಸ್. ಮುನಿರಾಜು ಭಾಗವಹಿಸಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಿ, ಭಕ್ತರೊಂದಿಗೆ ಜನ್ಮಾಷ್ಟಮಿ ಸಂಭ್ರಮದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಸ್. ಮುನಿರಾಜು, “ಶ್ರೀಕೃಷ್ಣ ಜನ್ಮಾಷ್ಟಮಿ ನಮ್ಮ ನಾಡಿನ ಪ್ರಮುಖ ಧಾರ್ಮಿಕ ಆಚರಣೆಗಳಲ್ಲಿ ಒಂದಾಗಿದೆ. ಶ್ರೀಕೃಷ್ಣನ ಜೀವನ ಸಂದೇಶವಾದ ಧರ್ಮ, ಸತ್ಯ, ಕರ್ತವ್ಯ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂತಹ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳು ಸಮಾಜದಲ್ಲಿ ಒಗ್ಗಟ್ಟು ಮತ್ತು ಸೌಹಾರ್ದತೆಯನ್ನು ಮತ್ತಷ್ಟು ಬಲಪಡಿಸುತ್ತವೆ. ಶ್ರೀಕೃಷ್ಣನ ಆಶೀರ್ವಾದದಿಂದ ಎಲ್ಲರ ಜೀವನದಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲಿ” ಎಂದು ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಬಿಜೆಪಿ ಮುಖಂಡರಾದ ರಮೇಶ್ ಯಾದವ್, ಶಬರಿ ಮಂಜುನಾಥ್, ಕಾಂಗ್ರೆಸ್ ಮುಖಂಡ ವೆಂಕಟೇಶ್ (ದೇವೇಗೌಡ) ಹಾಗೂ ಲಂಡನ್ ಮಂಜು ಭಾಗವಹಿಸಿ ಶ್ರೀಕೃಷ್ಣನ ಆಶೀರ್ವಾದ ಪಡೆದರು.
ಶ್ರೀ ಕೃಷ್ಣ ಯಾದವ ಸೇವಾ ಸಮಿತಿ (ರಿ) ಅಧ್ಯಕ್ಷ ಡಿ.ಎಂ. ಗೋಪಾಲ್, ವ್ಯವಸ್ಥಾಪಕ ಟ್ರಸ್ಟಿ ಶಬರಿ ಮಂಜುನಾಥ್, ಖಜಾಂಚಿ ಅನಿಲ್ ಕುಮಾರ್, ಉಪಾಧ್ಯಕ್ಷರಾದ ಹರೀಶ್ ಕೆ., ಸುಧಾಕರ್ ಬಿ.ಆರ್., ಅಪ್ಪಾಜಿ, ಸಂಘಟನಾ ಕಾರ್ಯದರ್ಶಿ ಪ್ರಕಾಶ್ ಹಾಗೂ ಕಾರ್ಯದರ್ಶಿ ಹರೀಶ್ ಸಿ. ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ಮುಖಂಡರು ಹಾಗೂ ಭಕ್ತರು ಉಪಸ್ಥಿತರಿದ್ದರು.ಜನ್ಮಾಷ್ಟಮಿ ಅಂಗವಾಗಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಇದೇ ಸಂದರ್ಭದಲ್ಲಿ ಸಮಿತಿ ವತಿಯಿಂದ ಗಣ್ಯರು ಹಾಗೂ ಪ್ರಮುಖರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಬಳಿಕ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದ್ದು, ನೂರಾರು ಭಕ್ತರು ಪ್ರಸಾದ ಸ್ವೀಕರಿಸಿದರು.
ವರದಿ : ಪಬ್ಲಿಕ್ ರೈಡ್ ದೇವರಾಜ್