ಧಾರವಾಡ: ಧಾರವಾಡದ ನವಲೂರು ರೈಲ್ವೆ ನಿಲ್ದಾಣದ ಬಳಿ ರೈಲು ಹಳಿಗೆ ಬಿದ್ದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ನಡೆದಿದೆ ಎಂದು ತಿಳಿದುಬಂದಿದೆ.
ರಾಯಪುರದ ಕುರುಬರ ಓಣಿಯ ನಿವಾಸಿ ಚೇತನ್ ಕಳ್ಳಿ (ಹೆಸರು) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳ ತನಿಖೆಯ ಬಳಿಕವಷ್ಟೇ ಘಟನೆಯ ಸಂಪೂರ್ಣ ವಿವರಗಳು ತಿಳಿದುಬರಬೇಕಿದೆ.