ಕರ್ನಾಟಕ

ವರದಿಯಾದ ಬೆನ್ನಲ್ಲೇ ಕಾರ್ಯಾಚರಣೆ: ರಸ್ತೆಯಲ್ಲಿದ್ದ ಬೇಕಾಬಿಟ್ಟಿ ವಾಹನಗಳ ತೆರವಿಗೆ ಮುಂದಾದ ಪೊಲೀಸರು!

ಮೂಲಕ News Desk | ಪ್ರಕಟಿಸಲಾಗಿದೆ November 7, 2026 November 7, 2026 | 11:51 AM 11 ವೀಕ್ಷಣೆಗಳು

ಗ್ಯಾಲಕ್ಸಿ ಮಾಲ್ ಎದುರಿನ ಜೆ.ಸಿ. ನಗರ ಮುಖ್ಯ ರಸ್ತೆಯಲ್ಲಿ ಸಂಚಾರ ಸುಗಮಗೊಳಿಸಲು ಪೊಲೀಸ್ ಸಿಬ್ಬಂದಿ ಅಖಾಡಕ್ಕೆ

ಹುಬ್ಬಳ್ಳಿ: ನಗರದ ಜೆ.ಸಿ. ನಗರ ಮುಖ್ಯ ರಸ್ತೆಯಲ್ಲಿರುವ ಗ್ಯಾಲಕ್ಸಿ ಮಾಲ್ ಎದುರು ಬೇಕಾಬಿಟ್ಟಿಯಾಗಿ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿರುವುದರಿಂದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿರುವ ಕುರಿತು ಸುದ್ದಿ ವರದಿಯಾದ ಬೆನ್ನಲ್ಲೇ ಪೊಲೀಸ್ ಸಿಬ್ಬಂದಿಗಳು ಕಾರ್ಯಪ್ರವೃತ್ತರಾಗಿದ್ದಾರೆ.

ರಸ್ತೆಯಲ್ಲಿಯೇ ಅಡ್ಡಾದಿಡ್ಡಿಯಾಗಿ ನಿಲ್ಲಿಸಲಾಗಿದ್ದ ವಾಹನಗಳನ್ನು ತೆರವುಗೊಳಿಸಲು ಪೊಲೀಸ್ ಸಿಬ್ಬಂದಿಗಳು ಸ್ಥಳದಲ್ಲಿ ನಿಂತು ಕ್ರಮ ಕೈಗೊಂಡಿದ್ದಾರೆ. ಇದರಿಂದ ಮುಖ್ಯ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಪ್ರಯತ್ನ ನಡೆದಿದೆ.

ಸಾರ್ವಜನಿಕರ ಸಮಸ್ಯೆಯನ್ನು ಸುದ್ದಿ ಮಾಧ್ಯಮದ ಮೂಲಕ ಗಮನಕ್ಕೆ ತಂದ ಬೆನ್ನಲ್ಲೇ ಪೊಲೀಸರು ಸ್ಪಂದಿಸಿರುವುದು ಗಮನಾರ್ಹವಾಗಿದೆ.

ಆದರೆ, ಕೇವಲ ಒಂದು ದಿನದ ಕಾರ್ಯಾಚರಣೆಗೆ ಸೀಮಿತವಾಗದೆ, ಈ ಭಾಗದಲ್ಲಿ ನಿರಂತರ ನಿಗಾ ವಹಿಸಿ ಬೇಕಾಬಿಟ್ಟಿ ಪಾರ್ಕಿಂಗ್‌ಗೆ ಶಾಶ್ವತ ಕಡಿವಾಣ ಹಾಕಬೇಕು. ಸಾರ್ವಜನಿಕರಿಗೆ ಸುಗಮ ಸಂಚಾರದ ವ್ಯವಸ್ಥೆ ಕಲ್ಪಿಸಬೇಕು ಎಂಬುದು ವಾಹನ ಸವಾರರ ಆಶಯವಾಗಿದೆ.