ಹುಬ್ಬಳ್ಳಿ:ಹುಬ್ಬಳ್ಳಿ ನಗರದ ಬೆಂಡಿಗೇರಿ ಪೊಲೀಸ್ ಠಾಣೆ ಸರಹದ್ದಿನ ಸೆಟ್ಲ್ಮೆಂಟ್ ಪ್ರದೇಶದಲ್ಲಿ ಗೋವುಗಳನ್ನು ಹೈಟೆಕ್ ಕಾರ್ ಬಳಸಿಕೊಂಡು ಕಳ್ಳತನ ಮಾಡಿಕೊಂಡು ಹೋಗುವ ಜಾಲವೊಂದು ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಮಾಲಿಕನೊಬ್ಬರು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಳ್ಳರನ್ನು ಪತ್ತೆಹಚ್ಚಲು ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
ಲಭಿಸಿರುವ ಮಾಹಿತಿಯ ಪ್ರಕಾರ, ಕೆಲವೇ ದಿನಗಳ ಹಿಂದೆ ಈ ಕೃತ್ಯ ನಡೆದಿದ್ದು, ಇಂತಹ ಘಟನೆಗಳು ಸುತ್ತಮುತ್ತಲಿನ ಹಲವಾರು ಪ್ರದೇಶಗಳಲ್ಲಿಯೂ ನಡೆಯುತ್ತಿರುವುದಾಗಿ ತಿಳಿದುಬಂದಿದೆ. ಕಳ್ಳರು ಅತ್ಯಾಧುನಿಕ ತಂತ್ರಜ್ಞಾನ ಬಳಸುವ ಹೈಟೆಕ್ ವಾಹನಗಳ ಮೂಲಕ ಗೋವುಗಳನ್ನು ಅಪಹರಿಸುತ್ತಿದ್ದು, ಸ್ಥಳೀಯ ರೈತರು ಮತ್ತು ಗೋಪಾಲಕರಲ್ಲಿ ಆತಂಕ ಮೂಡಿಸಿದೆ.
ಬೆಂಡಿಗೇರಿ ಪೊಲೀಸರು ಸಿಸಿಟಿವಿ ಫೂಟೇಜ್ ಪರಿಶೀಲನೆ, ಸ್ಥಳೀಯ ಮಾಹಿದಾರರ ನೆರವು ಮತ್ತು ತಂತ್ರಜ್ಞಾನ ಆಧಾರಿತ ತನಿಖೆಗಳನ್ನು ಕೈಗೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ಆರೋಪಿಗಳನ್ನು ಬಂಧಿಸಬೇಕು ಎಂಬ ಕೂಗು ಹೆಚ್ಚುತ್ತಿದೆ.