ಕರ್ನಾಟಕ

ಧಾರವಾಡ : ಏ.26ಕ್ಕೆ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಸಮ್ಮೇಳನ

ಮೂಲಕ News Desk | ಪ್ರಕಟಿಸಲಾಗಿದೆ April 24, 2026 April 24, 2026 | 01:46 PM 17 ವೀಕ್ಷಣೆಗಳು

ಧಾರವಾಡ: ಇಲ್ಲಿನ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಏ.26ರಂದು ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಸಮ್ಮೇಳನ ನಡೆಯಲಿದೆ' ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ತಿಳಿಸಿದರು.


ರಾಜ್ಯದ ವಿವಿಧೆಡೆಯಿಂದ ಸಾವಿರ ಮಂದಿ ಸರ್ಕಾರಿ ನೌಕರರು ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಲಿದ್ದಾರೆ. ಈ ವೇಳೆ ನೂತನ ಪದಾಧಿಕಾರಿಗಳ ಪದಗ್ರಹಣ, ಸಾಧಕ ಸರ್ಕಾರಿ ನೌಕರರಿಗೆ ಸನ್ಮಾನ ನಡೆಯಲಿದೆ' ಎಂದು ಹೇಳಿದರು.


ಈ ವೇಳೆ ಸರ್ಕಾರಿ ನೌಕರರ ಸಂಘದ ಸದಸ್ಯರು ಉಪಸ್ಥಿತರಿದ್ದರು.