ಹುಬ್ಬಳ್ಳಿ: ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದ್ದ ರೌಡಿಶೀಟರ್‌ಗಳು, MOB ಆರೋಪಿಗಳು ಹಾಗೂ NDPS ಪ್ರಕರಣಗಳಿಗೆ ಸಂಬಂಧಿಸಿದ ಆರೋಪಿಗಳ ವಿರುದ್ಧ ಹುಬ್ಬಳ್ಳಿ-ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಹಲವರನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.
ವಿದ್ಯಾಗಿರಿ ಪೊಲೀಸ್ ಠಾಣೆ, ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ಹಾಗೂ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆಯಿತು.
ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರೌಡಿಶೀಟರ್‌ಗಳು, MOB ಗಳು, NDPS ಆರೋಪಿಗಳು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತಿದ್ದವರನ್ನು ಗುರುತಿಸಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಧಾರವಾಡ ಮತ್ತು ಹುಬ್ಬಳ್ಳಿ ದಕ್ಷಿಣ ಉಪವಿಭಾಗಗಳ ACP ಅವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ನಗರದಲ್ಲಿ ಅಕ್ರಮ ಚಟುವಟಿಕೆಗಳು ಹಾಗೂ ಸಮಾಜವಿರೋಧಿ ಕೃತ್ಯಗಳಿಗೆ ಕಡಿವಾಣ ಹಾಕಲು ಇಂತಹ ವಿಶೇಷ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.