ಇಂಡಿಯಾ

ಹುಬ್ಬಳ್ಳಿ ಹೊಸ ಬಸ್ ನಿಲ್ದಾಣಕ್ಕೆ ಶಾಸಕ ಮಹೇಶ್ ತೆಂಗಿನಕಾಯಿ ಭೇಟಿ

ಮೂಲಕ News Desk | ಪ್ರಕಟಿಸಲಾಗಿದೆ May 23, 2026 May 23, 2026 | 02:40 PM 113 ವೀಕ್ಷಣೆಗಳು


ಹುಬ್ಬಳ್ಳಿ: ಪಶ್ಚಿಮ ಬಂಗಾಳದಿಂದ ಹುಬ್ಬಳ್ಳಿಯ ಮಾರ್ಗವಾಗಿ ಗೋವಾ ರಾಜ್ಯಕ್ಕೆ ನೂರಾರು ವಲಸಿಗರು ತೆರಳುತ್ತಿರುವ ಹಿನ್ನೆಲೆ ಹುಬ್ಬಳ್ಳಿಯ ಹೊಸ ಬಸ್ ನಿಲ್ದಾಣಕ್ಕೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ್ ತೆಂಗಿನಕಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಈ ವೇಳೆ ಬಸ್ ನಿಲ್ದಾಣದಲ್ಲಿ ತಂಗಿದ್ದ ವಲಸಿಗರ ದಾಖಲಾತಿಗಳು, ಗುರುತಿನ ಚೀಟಿಗಳು ಹಾಗೂ ಪ್ರಯಾಣದ ಮಾಹಿತಿಗಳನ್ನು ಸಮಗ್ರವಾಗಿ ಪರಿಶೀಲಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಶಾಸಕ ಮಹೇಶ್ ತೆಂಗಿನಕಾಯಿ ಸೂಚನೆ ನೀಡಿದರು. ಯಾವುದೇ ಅನುಮಾನಾಸ್ಪದ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.


ವಲಸಿಗರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.


ಈ ಸಂದರ್ಭದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.