ಹುಬ್ಬಳ್ಳಿ ಬ್ರೇಕಿಂಗ್
ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ಯುವಕರಿಬ್ಬರ ಮೇಲೆ ದುಷ್ಕರ್ಮಿಗಳ ಗುಂಪಿನಿಂದ ಹಲ್ಲೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಳಿ ಈ ಘಟನೆ ಸಂಭವಿಸಿದೆ ಚಂದು ಅಂದಾಜಿಸಲಾಗಿದೆ.
ಮಾಹಿತಿಯ ಪ್ರಕಾರ, ಸೈಯದ್ ಜಾಫರ್ ಹಾಹಾಗೂಅವನ ಸ್ನೇಹಿತ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಸುಮಾರು 15 ರಿಂದ 20 ಜನರ ಗುಂಪೊಂದು ಅವರನ್ನು ಅಡ್ಡಗಟ್ಟಿ ಹಿಗ್ಗಾಮುಗ್ಗವಾಗಿ ಹಲ್ಲೆ ನಡೆಸಿದೆ ಎನ್ನಲಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಸೈಯದ್ ಜಾಫರ್ ಅವರನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಕ್ತಸಿಕ್ತ ಸ್ಥಿತಿಯಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.
ಸೈಯದ್ ಜಾಫರ್ ಹುಬ್ಬಳ್ಳಿಯ ನವ ಆನಂದ ನಗರದ ನಿವಾಸಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಘಟನೆ ನಡೆದ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣ ಸಂಬಂಧ ವಿದ್ಯಾನಗರ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ನಗರದಲ್ಲಿ ನಡೆದ ಈ ಗ್ಯಾಂಗ್ ಹಲ್ಲೆ ಪ್ರಕರಣ ಸ್ಥಳೀಯರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.