ಬೆಂಗಳೂರು:ನಗರದಲ್ಲಿ ಮಾದಕ ದ್ರವ್ಯ ಜಾಲದ ವಿರುದ್ಧ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶಗಳಿಂದ ಪಾರ್ಸೆಲ್ ಮೂಲಕ ತರಲಾಗುತ್ತಿದ್ದ ಕೋಟಿ ಕೋಟಿ ಮೌಲ್ಯದ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನ ಫಾರಿನ್ ಪೋಸ್ಟ್ ಆಫೀಸ್‌ಗೆ ಬಂದಿದ್ದ ಪಾರ್ಸೆಲ್‌ಗಳ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಸ್ನಾಕ್ಸ್ ಬಾಕ್ಸ್‌ಗಳಲ್ಲಿ ಅಡಗಿಸಿ ಸಾಗಿಸಲಾಗುತ್ತಿದ್ದ ಡ್ರಗ್ ಪತ್ತೆ ಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 3 ಕೋಟಿ ರೂಪಾಯಿ ಮೌಲ್ಯದ 3 ಕೆಜಿ 312 ಗ್ರಾಂ ಹೈಡ್ರೋ ಗಾಂಜಾವನ್ನು ಸೀಜ್ ಮಾಡಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಅಮೆರಿಕಾ ಹಾಗೂ ಥೈಲ್ಯಾಂಡ್‌ನಿಂದ ಈ ಮಾದಕ ವಸ್ತುಗಳನ್ನು ಪಾರ್ಸೆಲ್ ಮೂಲಕ ಕಳುಹಿಸಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಡ್ರಗ್ ಜಾಲದ ಹಿಂದಿರುವ ಆರೋಪಿಗಳ ಬಗ್ಗೆ ಸಿಸಿಬಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.
ಸ್ನಾಕ್ಸ್ ಪ್ಯಾಕೆಟ್‌ಗಳ ಹೆಸರಿನಲ್ಲಿ ಮಾದಕ ವಸ್ತುಗಳನ್ನು ಅಡಗಿಸಿ ನಗರಕ್ಕೆ ಸಾಗಿಸಲು ಯತ್ನಿಸಿದ್ದ ಜಾಲವನ್ನು ಪತ್ತೆ ಹಚ್ಚಿರುವುದು ಪೊಲೀಸರ ಮಹತ್ವದ ಕಾರ್ಯಾಚರಣೆಯಾಗಿ ಪರಿಗಣಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸಿಸಿಬಿ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.