ಕರ್ನಾಟಕ

ಶಿಕ್ಷಣ ಸಂಸ್ಥೆಯಿಂದಲೇ ಮರಗಳ ಕಡಿತ ಆರೋಪ: ಸಾರ್ವಜನಿಕರ ಆಕ್ರೋಶ

ಮೂಲಕ News Desk | ಪ್ರಕಟಿಸಲಾಗಿದೆ May 28, 2026 May 28, 2026 | 11:25 AM 48 ವೀಕ್ಷಣೆಗಳು

ಶಿಕ್ಷಣ ಸಂಸ್ಥೆಯಿಂದಲೇ ಮರಗಳ ಕಡಿತ ಆರೋಪ: ಸಾರ್ವಜನಿಕರ ಆಕ್ರೋಶ

ಹುಬ್ಬಳ್ಳಿ: ನಗರದ ಆನಂದನಗರ ರಸ್ತೆಯಲ್ಲಿರುವ ಮೌಂಟ್ ಫರಾನ್ ಪಾಲಿಟೆಕ್ನಿಕ್ ಕಾಲೇಜ್ ಸಮೀಪ ರಸ್ತೆ ಬದಿಯಲ್ಲಿದ್ದ ಮರಗಳನ್ನು ಅನಧಿಕೃತವಾಗಿ ಕಡಿದು ಹಾಕಿರುವ ಆರೋಪ ಕೇಳಿಬಂದಿದ್ದು, ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.


ಪರಿಸರ ಸಂರಕ್ಷಣೆ ಮತ್ತು ಹಸಿರು ವಾತಾವರಣ ಉಳಿಸಬೇಕಾದ ಶಿಕ್ಷಣ ಸಂಸ್ಥೆಗಳೇ ಇದೀಗ ರಸ್ತೆ ಬದಿಯ ಮರಗಳನ್ನು ರಾಜಾರೋಷವಾಗಿ ಕಡಿದು ಹಾಕುತ್ತಿರುವುದು ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ. ಮೌಂಟ್ ಫರಾನ್ ಪಾಲಿಟೆಕ್ನಿಕ್ ಕಾಲೇಜ್ ಆಡಳಿತ ಮಂಡಳಿಯೇ ಈ ಮರಗಳನ್ನು ಕಡಿತ ಮಾಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳ ಮೌನ ಕೂಡ ಪ್ರಶ್ನೆಗೆ ಕಾರಣವಾಗಿದ್ದು, ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.


ಸ್ಥಳೀಯ ನಿವಾಸಿಗಳು ಹಾಗೂ ಪರಿಸರ ಪ್ರೇಮಿಗಳು ಮಾತನಾಡಿ, “ನಗರದಲ್ಲಿ ಈಗಾಗಲೇ ಹಸಿರು ಆವರಣ ಕಡಿಮೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ರಸ್ತೆ ಬದಿಯ ಮರಗಳನ್ನು ಕಡಿದು ಹಾಕುವುದು ಪರಿಸರದ ಮೇಲಿನ ದೌರ್ಜನ್ಯ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.


ಈ ಕುರಿತು ಸಂಬಂಧಪಟ್ಟ ಇಲಾಖೆಗಳು ಯಾವ ಕ್ರಮ ಕೈಗೊಳ್ಳುತ್ತವೆ ಎಂಬುದು ಇದೀಗ ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ.