ಕ್ರೈಂ

ಖಾತೆ ಬದಲಾವಣೆಗೆ ₹25 ಸಾವಿರ ಲಂಚ: ನಗರಸಭೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಮೂಲಕ News Desk | ಪ್ರಕಟಿಸಲಾಗಿದೆ June 3, 2026 June 3, 2026 | 03:30 AM 40 ವೀಕ್ಷಣೆಗಳು

ಪಬ್ಲಿಕ್ ರೈಡ್ ಚಾಮರಾಜನಗರ:ಖಾತೆ ಬದಲಾವಣೆ ಮಾಡಿಕೊಡುವ ಸಂಬಂಧ ಲಂಚ ಸ್ವೀಕರಿಸುತ್ತಿದ್ದ ವೇಳೆ ಚಾಮರಾಜನಗರ ನಗರಸಭೆಯ ಇಬ್ಬರು ಅಧಿಕಾರಿಗಳು ಹಾಗೂ ಓರ್ವ ಮಧ್ಯವರ್ತಿಯನ್ನು ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿ ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.


ನಗರಸಭೆಯ ಕಂದಾಯ ಅಧಿಕಾರಿ ಹೇಮಂತಕುಮಾರ್, ಕಂದಾಯ ನಿರೀಕ್ಷಕ ಶಕೀಲ್ ಅಹಮದ್ ಹಾಗೂ ಮಧ್ಯವರ್ತಿ ಹಬೀಬ್ ಬಂಧಿತ ಆರೋಪಿಗಳಾಗಿದ್ದಾರೆ.


ಮೀಸೆ ನಾಗರಾಜು ಎಂಬುವರ ಖಾತೆ ಬದಲಾವಣೆ ಪ್ರಕ್ರಿಯೆಗಾಗಿ ₹25 ಸಾವಿರ ಲಂಚ ನೀಡುವಂತೆ ಆರೋಪಿಗಳು ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ನಾಗರಾಜು ಅವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು.


ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿ ಆರೋಪಿಗಳನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.


ಬಂಧಿತರಿಂದ ಲಂಚದ ಹಣವನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


ಈ ಘಟನೆ ನಗರಸಭೆ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಇಲಾಖೆ ನಡೆಸುತ್ತಿರುವ ಕಾರ್ಯಾಚರಣೆಗೆ ಮತ್ತೊಂದು ಯಶಸ್ಸು ಸಿ

ಕ್ಕಂತಾಗಿದೆ.