ಕರ್ನಾಟಕ News

Discover the latest headlines in this section.

ಪೊಲೀಸ್ ಕಮಿಷನರ್ ಆಕ್ಟಿವ್: ಹುಬ್ಬಳ್ಳಿ-ಧಾರವಾಡದಲ್ಲಿ ಹೊಸ ಆಯಾಮದ ಚೆಕಿಂಗ್!

ಪೊಲೀಸ್ ಕಮಿಷನರ್ ಆಕ್ಟಿವ್: ಹುಬ್ಬಳ್ಳಿ-ಧಾರವಾಡದಲ್ಲಿ ಹೊಸ ಆಯಾಮದ ಚೆಕಿಂಗ್!

ಬಸ್‌–ರೈಲು ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾರಕಾಸ್ತ್ರಗಳಿಗಾಗಿ ತೀವ್ರ ತಪಾಸಣೆಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವ ಪೊಲೀಸ್ ಇಲಾಖೆ ಇದೀಗ ಹೊಸ ಮಾದರಿಯ ತಪಾಸಣಾ ಕಾರ್ಯಾಚರಣೆಗೆ ಮುಂದಾಗಿದೆ.ಪೊಲೀಸ್ ಕಮಿಷನರ್ ಅವರ ಸೂಚನೆಯಂತೆ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಆ್ಯಂಟಿ-ಸ್ಟ್ಯಾಬಿಂಗ್ ಸ್ಕ್ವಾಡ್‌ಗಳನ್ನು ಸಕ್ರಿಯಗೊಳಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ಮಾರಕಾಸ್ತ್ರಗಳ ಸಾಗಾಟದ ಮೇಲೆ ನಿಗಾ ವಹಿಸಲಾಗುತ್ತಿದೆ.ವಿಶೇಷವಾಗಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಜನದಟ್ಟಣೆ ಇರುವ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ವ್ಯಕ್ತಿಗಳು ಯಾವುದೇ ಚಾಕು, ಕತ್ತಿ ಸೇರಿದಂತೆ ಮಾರಕಾಸ್ತ್ರಗಳನ್ನು ಅಕ್ರಮವಾಗಿ ಹೊಂದಿದ್ದಾರೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.ತಪಾಸಣೆ ವೇಳೆ ಅಕ್ರಮವಾಗಿ ಮಾರಕಾಸ್ತ್ರ ಪತ್ತೆಯಾದಲ್ಲಿ, ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.ಈ ಕಾರ್ಯಾಚರಣೆಯ ಭಾಗವಾಗಿ ಇಂದು ಇದುವರೆಗೆ 215 ವಾಹನಗಳನ್ನು ಪರಿಶೀಲಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ತಪಾಸಣಾ ಕಾರ್ಯಾಚರಣೆ ಮುಂದುವರಿಯುವ ಸಾಧ್ಯತೆ ಇದೆ.ಹೊಸ ಮಾದರಿಯ ಈ ಕಾರ್ಯಾಚರಣೆಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ಜೊತೆಗೆ, ಮಾರಕಾಸ್ತ್ರಗಳ ಅಕ್ರಮ ಸಾಗಾಟ ಹಾಗೂ ಬಳಕೆಯನ್ನು ನಿಯಂತ್ರಿಸುವ ಉದ್ದೇಶವನ್ನು ಪೊಲೀಸ್ ಇಲಾಖೆ ಹೊಂದಿದೆ. ಪೊಲೀಸ್ ಕಮಿಷನರ್ ಅವರ ಈ ಕ್ರಮಕ್ಕೆ ಸಾರ್ವಜನಿಕರಿಂದಲೂ ಮೆಚ್ಚುಗೆ ವ್ಯಕ್ತವಾಗಿದ್ದು, ಅವಳಿ ನಗರದ ಸುರಕ್ಷತೆ ಮತ್ತಷ್ಟು ಬಲಪಡಿಸುವ ನಿರೀಕ್ಷೆ ಮೂಡಿದೆ.

Sep 6, 2026 | 03:15 PM
181 0
ಹುಬ್ಬಳ್ಳಿ-ಧಾರವಾಡದ ನೂತನ ಪೊಲೀಸ್ ಕಮಿಷನರ್ ಆಗಿ ಭೂಷಣ್ ಗುಲಾಬ್ರಾವ್ ಬೋರಸೆ ಅಧಿಕಾರ ಸ್ವೀಕಾರ

ಹುಬ್ಬಳ್ಳಿ-ಧಾರವಾಡದ ನೂತನ ಪೊಲೀಸ್ ಕಮಿಷನರ್ ಆಗಿ ಭೂಷಣ್ ಗುಲಾಬ್ರಾವ್ ಬೋರಸೆ ಅಧಿಕಾರ ಸ್ವೀಕಾರ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಐಪಿಎಸ್ ಅಧಿಕಾರಿ ಭೂಷಣ್ ಗುಲಾಬ್ರಾವ್ ಬೋರಸೆ ಅವರು ಇಂದು ಹುಬ್ಬಳ್ಳಿಗೆ ಆಗಮಿಸಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.ರಾಜ್ಯ ಸರ್ಕಾರದ ವರ್ಗಾವಣೆ ಆದೇಶದ ಹಿನ್ನೆಲೆಯಲ್ಲಿ ಬೆಳಗಾವಿ ನಗರದ ಉಪ ಪೊಲೀಸ್ ಮಹಾನಿರೀಕ್ಷಕ ಹಾಗೂ ಪೊಲೀಸ್ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭೂಷಣ್ ಗುಲಾಬ್ರಾವ್ ಬೋರಸೆ ಅವರನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿತ್ತು.ಇದೀಗ ಹುಬ್ಬಳ್ಳಿಗೆ ಆಗಮಿಸಿದ ಅವರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳು ನೂತನ ಕಮಿಷನರ್ ಅವರನ್ನು ಸ್ವಾಗತಿಸಿದರು.ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ನಿಯಂತ್ರಣ, ಮಾದಕ ವಸ್ತುಗಳ ಅಕ್ರಮಕ್ಕೆ ಕಡಿವಾಣ ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಪೊಲೀಸ್ ಸಂಪರ್ಕ ಸೇರಿದಂತೆ ಹಲವು ಸವಾಲುಗಳು ನೂತನ ಪೊಲೀಸ್ ಕಮಿಷನರ್ ಅವರ ಮುಂದಿವೆ.ಇದಕ್ಕೂ ಮುನ್ನ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್. ಶಶಿಕುಮಾರ್, ಐಪಿಎಸ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು. ಅವರ ಸ್ಥಾನಕ್ಕೆ ಇದೀಗ ಭೂಷಣ್ ಗುಲಾಬ್ರಾವ್ ಬೋರಸೆ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

Sep 3, 2026 | 09:29 AM
105 0
ಕಣಗಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 51ನೇ ವಾರ್ಷಿಕ ಸರ್ವಸಾಧಾರಣ ಸಭೆ

ಕಣಗಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 51ನೇ ವಾರ್ಷಿಕ ಸರ್ವಸಾಧಾರಣ ಸಭೆ

ಹುಕ್ಕೇರಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಣಗಲಾ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರಿ ಸಂಘದ 51ನೇ ವಾರ್ಷಿಕ ಸರ್ವಸಾಧಾರಣ ಸಭೆ ಸೆ.1ರಂದು ಕಣಗಲಾ ಗ್ರಾಮದ ಶ್ರೀ ಮಹಾದೇವ ಮಂದಿರದ ಸಭಾಭವನದಲ್ಲಿ ನಡೆಯಿತು.ಸಭೆಯಲ್ಲಿ ಸಂಘದ ಆರ್ಥಿಕ ವ್ಯವಹಾರಗಳು, ಸದಸ್ಯರ ಹಿತಾಸಕ್ತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.ಮಾರ್ಚ್ 31, 2026ರ ಅಂತ್ಯಕ್ಕೆ ಸಂಘವು ₹7,83,505 ಲಾಭ ಗಳಿಸಿದ್ದು, ₹77,09,650 ಶೇರು ಬಂಡವಾಳ, ₹68,26,998 ನಿಧಿಗಳು, ₹2,81,090 ಠೇವಣಿಗಳು ಹೊಂದಿದೆ. ಸಂಘದ ವಾರ್ಷಿಕ ವಹಿವಾಟು ₹7,96,04,188 ಆಗಿದ್ದು, ಒಟ್ಟು 1,026 ಸದಸ್ಯರು ಇದ್ದಾರೆ ಎಂದು ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತುಕಾರಾಮ ಲಕ್ಷ್ಮಣ ರೆಂಗಟೆ ಸಭೆಯಲ್ಲಿ ಮಾಹಿತಿ ನೀಡಿದರು.ಸಂಘದ ಸದಸ್ಯರಿಗೆ ನೀಡಬೇಕಾದ ಲಾಭಾಂಶದ ಮೊತ್ತವನ್ನು ಕಟ್ಟಡ ನಿಧಿಗೆ ವರ್ಗಾಯಿಸುವಂತೆ ಸಭೆಯಲ್ಲಿ ಹಾಜರಿದ್ದ ರೈತರು ಒಕ್ಕೊರಲಿನಿಂದ ಮನವಿ ಮಾಡಿದರು ಎಂದು ತಿಳಿಸಿದರು.ಸಭೆಗೆ ಸಂಘದ ಅಧ್ಯಕ್ಷ ಅಶೋಕ ಗುರುನಾಥ ಹಿರೇಕೊಡಿ, ಉಪಾಧ್ಯಕ್ಷ ವಿಜಯ ಬಾಳು ಪರೀಟ, ನಿರ್ದೇಶಕರಾದ ಹಣುಮಂತ ನಿಂಗಪ್ಪ ಗಜಬರೆ, ಶಂಕರ ದುಂಡಪ್ಪ ಶಿಂಧೆ, ವಿರುಪಾಕ್ಷ ಬಾಳಪ್ಪ ಖಣದಾಳೆ, ಪದ್ಮರಾಜ ರಾವಸಾಹೇಬ ಕಮತೆ, ಚಂದ್ರಕಾಂತ ಪ್ರಕಾಶ ಹವಾಲದಾರ, ಮಹಾಂತೇಶ ಮಹಾದೇವ ಕೋರವಿ, ತುಕಾರಾಮ ಮಾರುತಿ ನಾಯಿಕ, ವಿಜಯಮಾಲಾ ಪಾಂಡುರಂಗ ಪಾಟೀಲ್, ಶಾಲಿನಿ ಬಾಬುರಾವ್ ಹಿರೇಕೊಡಿ ಸೇರಿದಂತೆ ಅಕ್ಕತಾಯಿ ಮಾದೇವ ಮೋರೆ, ರಾವಸಾಹೇಬ ತಾತೋಬಾ ಕಮತೆ, ಸುನೀಲ ಹಾಗೂ ಗ್ರಾಮದ ಸುಮಾರು 550ಕ್ಕೂ ಹೆಚ್ಚು ರೈತರು ಮತ್ತು ಸದಸ್ಯರು ಉಪಸ್ಥಿತರಿದ್ದರು.ವರದಿಗಾರರು: ಸಂತೋಷ ನಿರ್ಮಲೆ, ಪಬ್ಲಿಕ್ ರೈಡ್

Sep 2, 2026 | 04:27 AM
168 0
ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಭೂಷಣ್ ಬೋರಸೆ ನೇಮಕ

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಭೂಷಣ್ ಬೋರಸೆ ನೇಮಕ

ಹುಬ್ಬಳ್ಳಿ:ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ  ಭೂಷಣ್ ಗುಲಾಬ್ರಾವ್ ಬೋರಸೆ  ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಪ್ರಸ್ತುತ ಬೆಳಗಾವಿ ನಗರದ ಉಪ ಪೊಲೀಸ್ ಮಹಾನಿರೀಕ್ಷಕ ಹಾಗೂ ಪೊಲೀಸ್ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭೂಷಣ್ ಗುಲಾಬ್ರಾವ್ ಬೋರಸೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.ಸರ್ಕಾರದ ಆದೇಶದಂತೆ, ಮುಂದಿನ ಆದೇಶದವರೆಗೆಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಹಾಗೂ ಉಪ ಪೊಲೀಸ್ ಮಹಾನಿರೀಕ್ಷಕರಾಗಿ  ಬೋರಸೆ ಅವರು ಕಾರ್ಯನಿರ್ವಹಿಸಲಿದ್ದಾರೆ.ಇದೇ ವೇಳೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಎನ್. ಶಶಿಕುಮಾರ್, ಐಪಿಎಸ್  ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಭೂಷಣ್ ಬೋರಸೆ ಅವರನ್ನು ನೇಮಕ ಮಾಡಲಾಗಿದೆ.ನೂತನ ಪೊಲೀಸ್ ಆಯುಕ್ತರ ನೇಮಕದೊಂದಿಗೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ  ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಆಡಳಿತದಲ್ಲಿ ಮತ್ತಷ್ಟು ಬದಲಾವಣೆಗಳ ನಿರೀಕ್ಷೆ ಮೂಡಿದೆ.

Aug 29, 2026 | 12:17 PM
651 0
ತೋಳನಕೆರೆ ಉದ್ಯಾನವನದಲ್ಲಿ ಅವ್ಯವಸ್ಥೆ: ಟೈಲ್ಸ್‌ಗೆ ಎಡವಿ ಹಿರಿಯ ನಾಗರಿಕರಿಗೆ ಗಾಯ

ತೋಳನಕೆರೆ ಉದ್ಯಾನವನದಲ್ಲಿ ಅವ್ಯವಸ್ಥೆ: ಟೈಲ್ಸ್‌ಗೆ ಎಡವಿ ಹಿರಿಯ ನಾಗರಿಕರಿಗೆ ಗಾಯ

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆಯಡಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿರುವ ಹುಬ್ಬಳ್ಳಿಯ ತೋಳನಕೆರೆ ಉದ್ಯಾನವನದಲ್ಲಿ ನಿರ್ವಹಣಾ ಲೋಪದ ಆರೋಪ ಕೇಳಿಬಂದಿದೆ. ನಿನ್ನೆ ಸಂಜೆ ಉದ್ಯಾನವನದಲ್ಲಿ ನಡೆದಾಡುತ್ತಿದ್ದ ಹಿರಿಯ ನಾಗರಿಕರೊಬ್ಬರು ಏರುಪೇರಾಗಿರುವ ಟೈಲ್ಸ್‌ಗೆ ಕಾಲು ತಾಗಿ ಎಡವಿ ಬಿದ್ದು, ಮುಖ ಹಾಗೂ ಬಾಯಿಗೆ ಗಾಯ ಮಾಡಿಕೊಂಡಿರುವ ಘಟನೆ ನಡೆದಿದೆ.ಉದ್ಯಾನವನದಲ್ಲಿ ಸಾರ್ವಜನಿಕರ ಓಡಾಟಕ್ಕಾಗಿ ಅಳವಡಿಸಿರುವ ಕೆಲವು ಟೈಲ್ಸ್‌ಗಳು ಸಮತಟ್ಟಾಗದೆ ಅಲ್ಲಲ್ಲಿ ಮೇಲೆ-ಕೆಳಗೆ ಆಗಿರುವುದು ಕಂಡುಬಂದಿದೆ. ಇದೇ ಕಾರಣಕ್ಕೆ ಹಿರಿಯ ನಾಗರಿಕರು ನಡೆದಾಡುವ ಸಂದರ್ಭದಲ್ಲಿ ಕಾಲು ಟೈಲ್ಸ್‌ಗೆ ತಾಗಿ ನಿಯಂತ್ರಣ ತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ.ಅದೃಷ್ಟವಶಾತ್ ಘಟನೆಯಲ್ಲಿ ಹಿರಿಯ ನಾಗರಿಕರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ, ಉದ್ಯಾನವನದಲ್ಲಿ ಇಂತಹ ಲೋಪದೋಷಗಳು ಮುಂದುವರಿದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ ಎಂಬ ಆತಂಕ ಸಾರ್ವಜನಿಕರಲ್ಲಿ ಮೂಡಿದೆ.ತೋಳನಕೆರೆ ಉದ್ಯಾನವನಕ್ಕೆ ಪುಟ್ಟ ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೆ ಪ್ರತಿದಿನವೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಾರೆ. ಹೀಗಾಗಿ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಉದ್ಯಾನವನದಲ್ಲಿರುವ ಏರುಪೇರು ಟೈಲ್ಸ್‌ಗಳು ಸೇರಿದಂತೆ ಎಲ್ಲಾ ಲೋಪದೋಷಗಳನ್ನು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಪರಿಶೀಲಿಸಿ ದುರಸ್ತಿಪಡಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪ್ರತಿಷ್ಠಿತ ಉದ್ಯಾನವನದಲ್ಲಿ ಮೂಲಸೌಕರ್ಯಗಳ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಬೇಕಿದ್ದು, ಮತ್ತೊಂದು ಅಪಘಾತ ಸಂಭವಿಸುವ ಮುನ್ನವೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ.

Aug 27, 2026 | 04:20 AM
41 0
ಹುಬ್ಬಳ್ಳಿಯಲ್ಲಿ ಹಿರಿಯ ವ್ಯಕ್ತಿಗೆ ಆಟೋ ಡಿಕ್ಕಿ: ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿಯಲ್ಲಿ ಹಿರಿಯ ವ್ಯಕ್ತಿಗೆ ಆಟೋ ಡಿಕ್ಕಿ: ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಶೆಲ್ ಪೆಟ್ರೋಲ್ ಬಂಕ್ ಸಮೀಪದ ಮುಖ್ಯ ರಸ್ತೆಯಲ್ಲಿ ಹಿರಿಯ ವ್ಯಕ್ತಿಯೊಬ್ಬರಿಗೆ ಆಟೋ ಡಿಕ್ಕಿ ಹೊಡೆದು, ಆಟೋ ಚಾಲಕ ಪರಾರಿಯಾಗಿರುವ ಘಟನೆ ನಡೆದಿದೆ ಎನ್ನಲಾಗಿದೆ.ಸ್ಥಳೀಯರ ಮಾಹಿತಿ ಪ್ರಕಾರ, ರಸ್ತೆ ದಾಟುತ್ತಿದ್ದ ಹಿರಿಯ ವ್ಯಕ್ತಿಗೆ ಆಟೋ ಡಿಕ್ಕಿ ಹೊಡೆದಿದ್ದು, ಅಪಘಾತದ ಬಳಿಕ ಆಟೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.ಡಿಕ್ಕಿಯ ಪರಿಣಾಮ ಹಿರಿಯ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎನ್ನಲಾಗಿದೆ.ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸುವ ಸಾಧ್ಯತೆಯಿದೆ. ಪರಾರಿಯಾಗಿರುವ ಆಟೋ ಚಾಲಕನ ಪತ್ತೆಗೆ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Aug 23, 2026 | 04:14 PM
520 0
ಪತ್ರಕರ್ತನ ಮೇಲಿನ ಹಲ್ಲೆ: ಸರ್ಕಾರಿ ವೈದ್ಯಾಧಿಕಾರಿ ಅಮಾನತು

ಪತ್ರಕರ್ತನ ಮೇಲಿನ ಹಲ್ಲೆ: ಸರ್ಕಾರಿ ವೈದ್ಯಾಧಿಕಾರಿ ಅಮಾನತು

ಬೆಂಗಳೂರು: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕನ್ನಡ ಪ್ರಭ ಪತ್ರಿಕೆಯ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಅಮಾನತುಗೊಳಿಸಲಾಗಿದೆ.ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಕುರಿತು ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ತಮ್ಮ ಪತ್ರಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಿದ್ದರು. ಇದರ ಬೆನ್ನಲ್ಲೇ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ವರ್ಗಾವಣೆ ಮಾಡಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶಿಸಿತ್ತು. ಆದರೆ, ಅವರು ವರ್ಗಾವಣೆಗೊಂಡ ಸ್ಥಳದಲ್ಲಿ ಕರ್ತವ್ಯಕ್ಕೆ ಹಾಜರಾಗದೆ, ಆಗಸ್ಟ್ 4ರಿಂದ ಸೆಪ್ಟೆಂಬರ್ 30ರವರೆಗೆ ರಜೆಯಲ್ಲಿದ್ದರು ಎಂದು ತಿಳಿದುಬಂದಿದೆ.ಈ ನಡುವೆ, ಆಗಸ್ಟ್ 21ರಂದು ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರು ತಮ್ಮ ಪತ್ನಿಯೊಂದಿಗೆ ಕುಂದಾಪುರದ ಹೋಟೆಲ್‌ನಲ್ಲಿ ತಿಂಡಿ ಸೇವಿಸುತ್ತಿದ್ದ ವೇಳೆ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಹಾಗೂ ಅವರ ಪತ್ನಿ ಅಲ್ಲಿಗೆ ಬಂದು ಏಕಾಏಕಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.ಘಟನೆಗೆ ಸಂಬಂಧಿಸಿದಂತೆ ಪತ್ರಕರ್ತರು ನೀಡಿದ ದೂರಿನ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ತಕ್ಷಣ ಸ್ಪಂದಿಸಿ, ಅಧಿಕಾರಿಗಳಿಗೆ ತನಿಖೆ ನಡೆಸುವಂತೆ ನಿರ್ದೇಶನ ನೀಡಿದ್ದರು.ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಿಂದ ವರದಿ ಪಡೆಯಲಾಗಿದ್ದು, ವರದಿಯಲ್ಲಿ ಮೇಲ್ನೋಟಕ್ಕೆ ಆರೋಪದಲ್ಲಿ ಸತ್ಯಾಂಶ ಕಂಡುಬಂದ ಹಿನ್ನೆಲೆಯಲ್ಲಿ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಅಮಾನತುಗೊಳಿಸಲಾಗಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಗುರುದತ್ತ ಹಗಡೆ ಅವರು ಅಮಾನತು ಆದೇಶ ಹೊರಡಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.ಪತ್ರಕರ್ತರ ಮೇಲಿನ ಹಲ್ಲೆ ಪ್ರಕರಣದಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತ್ವರಿತವಾಗಿ ಕ್ರಮ ಕೈಗೊಂಡಿರುವುದು ಇದೀಗ ಗಮನ ಸೆಳೆದಿದೆ.

Aug 23, 2026 | 02:17 AM
219 0
ಹುಬ್ಬಳ್ಳಿಯಲ್ಲಿ CL-2 ಲೈಸೆನ್ಸ್‌ನಲ್ಲೇ ಬಾರ್ ಅಂಡ್ ರೆಸ್ಟೋರೆಂಟ್? ಅಬಕಾರಿ ಇಲಾಖೆಯ ಮೌನಕ್ಕೆ ಪ್ರಶ್ನೆ

ಹುಬ್ಬಳ್ಳಿಯಲ್ಲಿ CL-2 ಲೈಸೆನ್ಸ್‌ನಲ್ಲೇ ಬಾರ್ ಅಂಡ್ ರೆಸ್ಟೋರೆಂಟ್? ಅಬಕಾರಿ ಇಲಾಖೆಯ ಮೌನಕ್ಕೆ ಪ್ರಶ್ನೆ

ಹುಬ್ಬಳ್ಳಿ: ನಗರದಲ್ಲಿ CL-2 ಮದ್ಯ ಮಾರಾಟ ಪರವಾನಗಿ ಹೊಂದಿರುವ ಕೆಲ ಮದ್ಯದಂಗಡಿಗಳಲ್ಲಿ ನಿಯಮ ಮೀರಿ ಬಾರ್ ಅಂಡ್ ರೆಸ್ಟೋರೆಂಟ್ ಮಾದರಿಯಲ್ಲಿ ವ್ಯವಹಾರ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ನಿಯಮಾನುಸಾರ ಅನುಮತಿ ಇಲ್ಲದೆ ಗ್ರಾಹಕರಿಗೆ ಮದ್ಯದೊಂದಿಗೆ ಆಹಾರ ಸೇವನೆಗೆ ಅವಕಾಶ ನೀಡಲಾಗುತ್ತಿದೆಯೇ ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಹುಬ್ಬಳ್ಳಿಯ ಹಳೆ ಹುಬ್ಬಳ್ಳಿ ಭಾಗದಲ್ಲಿ ಚನ್ನಪೇಟೆ ಕಡೆಗೆ ತೆರಳುವ ಮಾರ್ಗದಲ್ಲಿರುವ ಶ್ರೀ ರೇಣುಕಾ ವೈನ್ ಹೌಸ್‌ನಲ್ಲಿ CL-2 ಲೈಸೆನ್ಸ್ ಹೊಂದಿದ್ದರೂ, ಬಾರ್ ಅಂಡ್ ರೆಸ್ಟೋರೆಂಟ್ ರೀತಿಯಲ್ಲಿ ವ್ಯವಹಾರ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.CL-2 ಪರವಾನಗಿಯ ವ್ಯಾಪ್ತಿ ಮತ್ತು ಬಾರ್ ಅಂಡ್ ರೆಸ್ಟೋರೆಂಟ್ ನಡೆಸಲು ಅಗತ್ಯವಿರುವ ಪ್ರತ್ಯೇಕ ಅನುಮತಿಗಳು ಹಾಗೂ ಷರತ್ತುಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದನ್ನು ಅಬಕಾರಿ ಇಲಾಖೆ ಪರಿಶೀಲಿಸಬೇಕಿದೆ. ಆದರೆ ಇಂತಹ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳಿದ್ದರೂ ಇದುವರೆಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಶೀಲನೆ ಅಥವಾ ಕ್ರಮ ಕೈಗೊಂಡಿದ್ದಾರೆಯೇ ಎಂಬುದು ಪ್ರಶ್ನೆಯಾಗಿದೆ.ಅಧಿಕಾರಿಗಳ ಗಮನಕ್ಕೆ ಬಂದಿಲ್ಲವೇ? ಅಥವಾ ಗೊತ್ತಿದ್ದರೂ ಮೌನವೇ?ಕಾನೂನು ಮತ್ತು ಪರವಾನಗಿ ನಿಯಮಗಳನ್ನು ಉಲ್ಲಂಘಿಸಿ ವ್ಯವಹಾರ ನಡೆಸಲಾಗುತ್ತಿದೆ ಎಂಬ ಆರೋಪಗಳು ಸತ್ಯವಾಗಿದ್ದರೆ, ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪರವಾನಗಿ ಷರತ್ತುಗಳ ಉಲ್ಲಂಘನೆಯಾಗಿದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕಿದೆ. ತಪ್ಪು ಕಂಡುಬಂದಲ್ಲಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯವೂ ಕೇಳಿಬರುತ್ತಿದೆ.ಇದೇ ರೀತಿಯಲ್ಲಿ ಹುಬ್ಬಳ್ಳಿ ನಗರದ ವಿವಿಧ ಭಾಗಗಳಲ್ಲಿ CL-2 ಲೈಸೆನ್ಸ್ ಹೊಂದಿರುವ ಕೆಲವು ಮದ್ಯದಂಗಡಿಗಳು ನಿಯಮಬಾಹಿರವಾಗಿ ಬಾರ್ ಅಂಡ್ ರೆಸ್ಟೋರೆಂಟ್ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂಬ ಆರೋಪಗಳೂ ಕೇಳಿಬರುತ್ತಿವೆ.CL-2 ಲೈಸೆನ್ಸ್‌ನಲ್ಲೇ ಬಾರ್ ಅಂಡ್ ರೆಸ್ಟೋರೆಂಟ್ ನಡೆಸಲು ಅವಕಾಶ ಇದೆಯೇ?ಅನುಮತಿ ಮತ್ತು ಪರವಾನಗಿ ಷರತ್ತುಗಳ ಕುರಿತು ಅಬಕಾರಿ ಇಲಾಖೆ ಸ್ಪಷ್ಟನೆ ನೀಡಬೇಕಿದೆ. ಸ್ಥಳ ಪರಿಶೀಲನೆ ನಡೆಸಿ ನಿಯಮ ಉಲ್ಲಂಘನೆ ಕಂಡುಬಂದರೆ ಕ್ರಮ ಕೈಗೊಳ್ಳಲಾಗುತ್ತದೆಯೇ ಎಂಬುದನ್ನೂ ಇಲಾಖೆ ಸಾರ್ವಜನಿಕರಿಗೆ ತಿಳಿಸಬೇಕಿದೆ.ಈ ಕುರಿತು ದಾಖಲೆಗಳು, ಪರವಾನಗಿ ವಿವರಗಳು ಹಾಗೂ ಸ್ಥಳೀಯ ಪರಿಶೀಲನೆಯ ಆಧಾರದ ಮೇಲೆ ‘ಪಬ್ಲಿಕ್ ರೈಡ್’ ಮುಂದಿನ ವರದಿಯಲ್ಲಿ ಹುಬ್ಬಳ್ಳಿಯ ಇನ್ನಷ್ಟು ಪ್ರಕರಣಗಳನ್ನು ಬಹಿರಂಗಪಡಿಸಲಿದೆ.

Aug 19, 2026 | 01:53 AM
167 0
ಗಣೇಶ ಹಬ್ಬಕ್ಕೆ ಧ್ವನಿವರ್ಧಕ, ಪಿಓಪಿ ವಿಗ್ರಹಗಳಿಗೆ ಕಡಿವಾಣ

ಗಣೇಶ ಹಬ್ಬಕ್ಕೆ ಧ್ವನಿವರ್ಧಕ, ಪಿಓಪಿ ವಿಗ್ರಹಗಳಿಗೆ ಕಡಿವಾಣ

ಧಾರವಾಡ: ಗಣೇಶ ಹಬ್ಬದ ವೇಳೆ ಮಿತಿ ಮೀರಿ ಡಿಜೆ ಸೌಂಡ್ ಸಿಸ್ಟಮ್ ಬಳಸಿದರೆ 1 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುವುದು ಎಂದು ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಎಚ್ಚರಿಕೆ ನೀಡಿದ್ದಾರೆ.ಜಿಲ್ಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಗಣೇಶ ವಿಗ್ರಹಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪಿಓಪಿ ವಿಗ್ರಹಗಳು ಕಂಡುಬಂದರೆ ಜಪ್ತಿ ಮಾಡಿ, ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.ಗಣೇಶ ಹಬ್ಬದ ವೇಳೆ ಡಿಜೆ ಬದಲಿಗೆ ಡೊಳ್ಳು ಕುಣಿತ, ಹೆಜ್ಜೆ ಮೇಳ, ಕರಡಿ ಮಜಲು ಸೇರಿದಂತೆ ಸಾಂಪ್ರದಾಯಿಕ ಕಲೆಗಳಿಗೆ ಪ್ರೋತ್ಸಾಹ ನೀಡುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ. ಪಿಓಪಿ ವಿಗ್ರಹಗಳ ಅಕ್ರಮ ಸಾಗಾಟ ತಡೆಯಲು ಗಡಿ ಪ್ರದೇಶಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ.ಹು-ಧಾ ಮಹಾನಗರ ಪಾಲಿಕೆಯಿಂದ ಮಣ್ಣಿನ ಗಣಪತಿ ತಯಾರಕರಿಗೆ 25 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಸಾರ್ವಜನಿಕರು ಪರಿಸರ ಸ್ನೇಹಿ ಮಣ್ಣಿನ ಗಣಪತಿ ಬಳಸಿ, ನಿಯೋಜಿತ ನೀರಿನ ತೊಟ್ಟಿಗಳಲ್ಲೇ ವಿಸರ್ಜನೆ ಮಾಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Aug 19, 2026 | 03:41 AM
43 0
15ನೇ ಆಗಸ್ಟ್ ಸ್ವಾತಂತ್ರ್ಯ ದಿನಾಚರಣೆ – ಗ್ರಾಮ ಪಂಚಾಯತ ಕಣಗಲಾ

15ನೇ ಆಗಸ್ಟ್ ಸ್ವಾತಂತ್ರ್ಯ ದಿನಾಚರಣೆ – ಗ್ರಾಮ ಪಂಚಾಯತ ಕಣಗಲಾ

ಕಣಗಲಾ ಗ್ರಾಮ ಪಂಚಾಯತ್ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಗ್ರಾಮ ಪಂಚಾಯತ ಆವರಣದಲ್ಲಿ ರಾಷ್ಟ್ರಧ್ವಜಾರೋಹಣವನ್ನು ಗ್ರಾಮ ಪಂಚಾಯತ ಆಡಳಿತಾಧಿಕಾರಿಯಾದ ನೇಮಕವಾಗಿರುವ  ಶ್ರೀ ಪ್ರಶಾಂತ ಮುನ್ನೋಳಿ ಸರ್ ಇವರು ನೆರವೇರಿಸಿದರು .ಸರಿ ಕಾರ್ಯಕ್ರಮದಲ್ಲಿ ಕಣಗಲಾ ಗ್ರಾಮದ ಆಜಿ-ಮಾಜಿ ಸೈನಿಕರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು,, ಸದಸ್ಯರು,  ಪಂಚಾಯತ ಅಭಿವೃದ್ಧಿ ಅಧಿಕಾರಿ, ಸದಸ್ಯರು, ಗ್ರಾಮಸ್ಥರು ಹಾಗೂ ಗಣ್ಯರು ಉಪಸ್ಥಿತರಿದ್ದರು.ನಂತರ ರಾಷ್ಟ್ರಗೀತೆ ಹಾಡಿ, ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ವೀರರನ್ನು ಸ್ಮರಿಸಲಾಯಿತು.ಕಾರ್ಯಕ್ರಮದಲ್ಲಿ ಇತ್ತಿಚಿಗೆ 17 ವರ್ಷಗಳ ಕಾಲ ದೇಶಕ್ಕಾಗಿ ಸೇವೆ ಸಲ್ಲಿಸಿ ಬಂದಿರುವ ಮಾತನಾಡಿದ ಮಾಜಿ ಸೈನಿಕರಾದ  ಶ್ರೀ ಉಮೇಶ ಗುರವ ಹಾಗೂ ಅಮಿತ ಹಸೂರೆ ಇವರು ಮಾತನಾಡಿ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬ ನಾಗರಿಕರೂ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಗ್ರಾಮಗಳ ಅಭಿವೃದ್ಧಿ, ಸ್ವಚ್ಛತೆ, ಶಿಕ್ಷಣ ಹಾಗೂ ಸಾಮಾಜಿಕ ಏಕತೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಸದಸ್ಯರು, ಅಧಿಕಾರಿಗಳು, ಶಾಲಾ ಶಿಕ್ಷಕರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು,  ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.ಅದೇ ತರನಾಗಿ ಈ ಕಾರ್ಯಕ್ರಮದ ನಂತರ ಕಣಗಲಾ ಗ್ರಾಮದಲ್ಲಿ ವೀರರಾಣಿ ಕಿತ್ತೂರ ಚನ್ನಮ್ಮಾ ವೃತ್ತವನ್ನು ಸಹ ಲಕ್ಷ್ಮೀ ಗಲ್ಲಿಯ ವಾಳಕಿ ರಸ್ತೆಯಲ್ಲಿರುವ ಶ್ರೀ ಕುಂತಿನಾಥ ಕಮತೆ ಇವರ ಮನೆಯ ಹತ್ತಿರ ಉದ್ಘಾಟನೆ ಮಾಡಲಾಯಿತು. ಸದರಿ ಉದ್ಘಾಟನೆಯನ್ನು ಶ್ರೀ ಅಣ್ಣಾವೃ ರೇಂಗಟೆ, ಶ್ರೀ ಅಶೋಕ ಹಿರೆಕೋಡಿ, ಶ್ರೀ ರಾಜು ಆದಪ್ಪಾ ಕಮತೆ, ಸಿದ್ದು ಕರಿಗಾರ, ಮಾರುತಿ ನಾಯಿಕ, ಶಂಕರ ಕಲ್ಯಾಣಿ, ಅಣ್ಣಪ್ಪಾ ಕೋರೆ ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.ವರದಿಗಾರರು:ಸಂತೋಷ ನಿರ್ಮಲೆ (ಬೆಳಗಾವಿ)

Aug 16, 2026 | 01:57 PM
226 0
ಗುರು ರಾಘವೇಂದ್ರ ಸ್ವಾಮಿಗಳ ಪವಾಡವೇ? 7 ತಿಂಗಳ ಬಳಿಕ ಮತ್ತೆ ನಡೆದಾಡಿದ ಮೆಡಿಕಲ್ ವಿದ್ಯಾರ್ಥಿನಿ!

ಗುರು ರಾಘವೇಂದ್ರ ಸ್ವಾಮಿಗಳ ಪವಾಡವೇ? 7 ತಿಂಗಳ ಬಳಿಕ ಮತ್ತೆ ನಡೆದಾಡಿದ ಮೆಡಿಕಲ್ ವಿದ್ಯಾರ್ಥಿನಿ!

ಹಾವೇರಿ: ಅಪರೂಪದ ಆಟೋಇಮ್ಯೂನ್ ಸಮಸ್ಯೆಯಿಂದ ಕಳೆದ ಏಳು ತಿಂಗಳಿಂದ ತೀವ್ರ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ 22 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಇದೀಗ ಮತ್ತೆ ಸ್ವತಂತ್ರವಾಗಿ ನಡೆಯುವಂತಾಗಿದ್ದಾರೆ.ಈ ಚೇತರಿಕೆಯನ್ನು ಕುಟುಂಬಸ್ಥರು ಗುರು ರಾಘವೇಂದ್ರ ಸ್ವಾಮಿಗಳ ಕೃಪೆ ಹಾಗೂ ಆಶೀರ್ವಾದ ಎಂದು ನಂಬಿದ್ದಾರೆ.ಹಾವೇರಿ ತಾಲೂಕಿನ ನೆಗಳೂರು ಗ್ರಾಮದ ನಿವೇದಿತಾ ಶಿವಪ್ಪ ನೆಗಳೂರು ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದು, ಕಳೆದ ಏಳು ತಿಂಗಳಿಂದ ಪದೇಪದೇ ಮೂರ್ಚೆ ಹೋಗುವುದು, ಕೈ-ಕಾಲುಗಳ ಸ್ವಾಧೀನ ಕಳೆದುಕೊಳ್ಳುವುದು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ತೀವ್ರ ತೊಂದರೆಯಿಂದಾಗಿ ಅವರು ವೀಲ್‌ಚೇರ್‌ ಆಶ್ರಯಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.ಹಾವೇರಿ ಹಾಗೂ ಹುಬ್ಬಳ್ಳಿಯ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ನಿರೀಕ್ಷಿತ ಮಟ್ಟದ ಚೇತರಿಕೆ ಕಂಡುಬಂದಿರಲಿಲ್ಲ. ಚಿಕಿತ್ಸೆಗಾಗಿ ಕುಟುಂಬಸ್ಥರು ಲಕ್ಷಾಂತರ ರೂಪಾಯಿ ವೆಚ್ಚ ಮಾಡಿದರೂ ಆರೋಗ್ಯದಲ್ಲಿ ಹೆಚ್ಚಿನ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ಕುಟುಂಬವು ಆಧ್ಯಾತ್ಮಿಕ ಮಾರ್ಗದ ಮೊರೆ ಹೋಯಿತು.ಈ ಸಂದರ್ಭದಲ್ಲಿ ಕುಟುಂಬಸ್ಥರು ಹೊಸರಿತ್ತಿ ರಾಯರ ಮಠಕ್ಕೆ ತೆರಳಿದ್ದರು. ಅಲ್ಲಿ 100ನೇ ಸುಶೀಲೇಂದ್ರತೀರ್ಥ ಆರಾಧನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಶ್ರೀ ಸುಭುದೇಂದ್ರ ತೀರ್ಥ ಸ್ವಾಮೀಜಿಗಳ ಆಶೀರ್ವಾದವನ್ನು ನಿವೇದಿತಾ ಪಡೆದರು. ಸ್ವಾಮೀಜಿಗಳು ಅವರಿಗೆ ರಾಯರ ಮಂತ್ರಾಕ್ಷತೆ ಹಾಗೂ ಭಾವಚಿತ್ರ ನೀಡಿ, ಐದು ವಾರಗಳ ಕಾಲ ಹರಕೆ ನಡೆಸುವಂತೆ ಸಲಹೆ ನೀಡಿದ್ದರು ಎನ್ನಲಾಗಿದೆ.ಕುಟುಂಬಸ್ಥರ ಪ್ರಕಾರ, ಹರಕೆ ಆರಂಭಿಸಿದ ಕೇವಲ ಮೂರು ವಾರಗಳಲ್ಲೇ ನಿವೇದಿತಾ ಅವರ ಆರೋಗ್ಯದಲ್ಲಿ ಗಮನಾರ್ಹ ಬದಲಾವಣೆ ಕಾಣಿಸಿಕೊಂಡಿತು. ಐದು ವಾರಗಳ ಹರಕೆ ಪೂರ್ಣಗೊಳಿಸಿದ ಬಳಿಕ ಇದೀಗ ಅವರು ಸ್ವತಃ ನಡೆಯುವುದಲ್ಲದೆ ಓಡಾಡುವಂತಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.ಏಳು ತಿಂಗಳ ಕಾಲ ವೀಲ್‌ಚೇರ್‌ನಲ್ಲಿದ್ದ ಮೆಡಿಕಲ್ ವಿದ್ಯಾರ್ಥಿನಿ ಮತ್ತೆ ತನ್ನ ಕಾಲ ಮೇಲೆ ನಿಂತು ನಡೆಯುತ್ತಿರುವುದು ಕುಟುಂಬಸ್ಥರಲ್ಲಿ ಸಂತಸ ಮೂಡಿಸಿದೆ. ಈ ಚೇತರಿಕೆಯ ಹಿಂದೆ ಗುರು ರಾಘವೇಂದ್ರ ಸ್ವಾಮಿಗಳ ಕೃಪೆಯೇ ಕಾರಣ ಎಂದು ಕುಟುಂಬಸ್ಥರು ಭಕ್ತಿಭಾವದಿಂದ ನಂಬಿದ್ದಾರೆ.

Aug 16, 2026 | 05:03 AM
96 0
ಕಣಗಲಾ ಗ್ರಾಮದ ಗ್ರಾಮ ಆಡಳಿತ (ಕಂದಾಯ) ಕಛೇರಿಯಲ್ಲಿ ಸಂಭ್ರಮದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಕಣಗಲಾ ಗ್ರಾಮದ ಗ್ರಾಮ ಆಡಳಿತ (ಕಂದಾಯ) ಕಛೇರಿಯಲ್ಲಿ ಸಂಭ್ರಮದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಕಣಗಲಾ ಆಗಸ್ಟ್ 15:ಗ್ರಾಮದ ಗ್ರಾಮ ಆಡಳಿತ ಕಛೇರಿಯ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ದೇಶಭಕ್ತಿ ಭಾವನೆಯೊಂದಿಗೆ ಆಚರಿಸಲಾಯಿತು. 1947ರ ಆಗಸ್ಟ್ 15ರಂದು ಭಾರತ ಸ್ವಾತಂತ್ರ್ಯ ಪಡೆದಿದ್ದು, 2026ರಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಗ್ರಾಮ ಪ್ರಮುಖರಾದ ಶ್ರೀ ಮಹಾದೇವ ಮಲ್ಲಪ್ಪಾ ಮಗದುಮ ಇವರು ಧ್ವಜಾರೋಹಣ ನೆರವೇರಿಸಿದರು. ನಂತರ ರಾಷ್ಟ್ರಗೀತೆ ಮೊಳಗಿಸಲಾಯಿತು. ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಆಡಳಿತ ಶ್ರೀ ವಿಠ್ಠಲ ಬುಗನಟ್ಟಿ ಅವರು, “ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಅವರ ಆದರ್ಶಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ.” ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಗ್ರಾಮ ಆಡಳಿತ ಅಧಿಕಾರಿ, ಸಿಬ್ಬಂದಿ, ಕಣಗಲಾ ಗೃಹ ರಕ್ಷಕ ದಳದ ಎಲ್ಲ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.ಕೊನೆಯಲ್ಲಿ ಎಲ್ಲರಿಗೂ ಸಿಹಿ ವಿತರಿಸಲಾಯಿತು.

Aug 15, 2026 | 02:28 PM
255 0