ಕ್ರೈಂ News

Discover the latest headlines in this section.

ಧಾರವಾಡದಲ್ಲಿ ಅಕ್ರಮ ಗೋವು ಕಸಾಯಿಖಾನೆ ಮೇಲೆ ಬಜರಂಗದಳ ದಾಳಿ

ಧಾರವಾಡದಲ್ಲಿ ಅಕ್ರಮ ಗೋವು ಕಸಾಯಿಖಾನೆ ಮೇಲೆ ಬಜರಂಗದಳ ದಾಳಿ

ಧಾರವಾಡ: ಜಿಲ್ಲೆಯ ಉಪ್ಪಿನ ಬೆಟಗೇರಿ ಪ್ರದೇಶದ ಕಟುಕರ ಓಣಿಯಲ್ಲಿ ಅಕ್ರಮವಾಗಿ ಹಸು, ಆಕಳು ಹಾಗೂ ಕರುಗಳನ್ನು ಕಡಿದು ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ, ಬಜರಂಗದಳ ಕಾರ್ಯಕರ್ತರು ಸ್ಥಳಕ್ಕೆ ದಾಳಿ ನಡೆಸಿದ ಘಟನೆ ನಡೆದಿದೆ.ದಾಳಿಯ ವೇಳೆ ಸ್ಥಳದಲ್ಲಿ ಗೋವುಗಳ ಚರ್ಮ, ಮಾಂಸ ಸೇರಿದಂತೆ ವಿವಿಧ ಅವಶೇಷಗಳನ್ನು ಬಕೆಟ್ ಹಾಗೂ ಬ್ಯಾರೆಲ್‌ಗಳಲ್ಲಿ ಸಂಗ್ರಹಿಸಿಟ್ಟಿರುವುದು ಕಂಡುಬಂದಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ. ಸ್ಥಳದಲ್ಲಿದ್ದ ದೃಶ್ಯಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿದ್ದ ಮಾಂಸ ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿರುವುದಾಗಿ ತಿಳಿದುಬಂದಿದೆ.ಈ ಪ್ರಕರಣ ಸಂಬಂಧವಾಗಿ ಅಕ್ರಮ ಗೋಹತ್ಯೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ ಕುರಿತು ಕ್ರಮ ಕೈಗೊಳ್ಳುವಂತೆ ಬಜರಂಗದಳ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.ಪ್ರಕರಣ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

May 25, 2026 | 02:55 PM
80 0
ಹುಬ್ಬಳ್ಳಿಯಲ್ಲಿ ಯುವಕರ ಮೇಲೆ ಗ್ಯಾಂಗ್ ಹಲ್ಲೆ: ಕಿಮ್ಸ್‌ನಲ್ಲಿ ಸೈಯದ್ ಜಾಫರ್ ಚಿಕಿತ್ಸೆ

ಹುಬ್ಬಳ್ಳಿಯಲ್ಲಿ ಯುವಕರ ಮೇಲೆ ಗ್ಯಾಂಗ್ ಹಲ್ಲೆ: ಕಿಮ್ಸ್‌ನಲ್ಲಿ ಸೈಯದ್ ಜಾಫರ್ ಚಿಕಿತ್ಸೆ

ಹುಬ್ಬಳ್ಳಿ ಬ್ರೇಕಿಂಗ್ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ಯುವಕರಿಬ್ಬರ ಮೇಲೆ ದುಷ್ಕರ್ಮಿಗಳ ಗುಂಪಿನಿಂದ ಹಲ್ಲೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಳಿ ಈ ಘಟನೆ ಸಂಭವಿಸಿದೆ ಚಂದು ಅಂದಾಜಿಸಲಾಗಿದೆ.ಮಾಹಿತಿಯ ಪ್ರಕಾರ, ಸೈಯದ್ ಜಾಫರ್ ಹಾಹಾಗೂಅವನ ಸ್ನೇಹಿತ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಸುಮಾರು 15 ರಿಂದ 20 ಜನರ ಗುಂಪೊಂದು ಅವರನ್ನು ಅಡ್ಡಗಟ್ಟಿ ಹಿಗ್ಗಾಮುಗ್ಗವಾಗಿ ಹಲ್ಲೆ ನಡೆಸಿದೆ ಎನ್ನಲಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಸೈಯದ್ ಜಾಫರ್ ಅವರನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಕ್ತಸಿಕ್ತ ಸ್ಥಿತಿಯಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.ಸೈಯದ್ ಜಾಫರ್ ಹುಬ್ಬಳ್ಳಿಯ ನವ ಆನಂದ ನಗರದ ನಿವಾಸಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಘಟನೆ ನಡೆದ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣ ಸಂಬಂಧ  ವಿದ್ಯಾನಗರ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.ನಗರದಲ್ಲಿ ನಡೆದ ಈ ಗ್ಯಾಂಗ್ ಹಲ್ಲೆ ಪ್ರಕರಣ ಸ್ಥಳೀಯರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

May 24, 2026 | 04:47 PM
291 0
ಚಿತ್ರದುರ್ಗದಲ್ಲಿ ಹಾಡಹಗಲೇ 4 ಲಕ್ಷ ರೂ. ದೋಚಿದ ಖತರ್ನಾಕ್ ಕಳ್ಳರು

ಚಿತ್ರದುರ್ಗದಲ್ಲಿ ಹಾಡಹಗಲೇ 4 ಲಕ್ಷ ರೂ. ದೋಚಿದ ಖತರ್ನಾಕ್ ಕಳ್ಳರು

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಹಾಡಹಗಲೇ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೈಕ್ ಸೈಡ್ ಬ್ಯಾಗ್‌ನಲ್ಲಿ ಇಟ್ಟಿದ್ದ ಸುಮಾರು 4 ಲಕ್ಷ ರೂಪಾಯಿ ಹಣವನ್ನು ಇಬ್ಬರು ಖತರ್ನಾಕ್ ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ.ಮುಷ್ಟಲಗುಮ್ಮಿ ಗ್ರಾಮದ ಶಿಕ್ಷಕ ಸಿ.ಎನ್. ಉಮೇಶ್ ಅವರಿಗೆ ಸೇರಿದ ಹಣ ಇದಾಗಿದ್ದು, ಕುಟುಂಬದ ಮದುವೆ ಕಾರ್ಯಕ್ರಮದ ಹಿನ್ನೆಲೆ ಬ್ಯಾಂಕ್‌ನಿಂದ ಹಣ ಡ್ರಾ ಮಾಡಿಕೊಂಡು ಬಂದಿದ್ದರು ಎನ್ನಲಾಗಿದೆ. ಬಳಿಕ ನಾಯಕನಹಟ್ಟಿಯ ಪೋಸ್ಟ್ ಆಫೀಸ್ ಬಳಿ ಬೈಕ್ ನಿಲ್ಲಿಸಿ ಒಳಗೆ ತೆರಳಿದ್ದ ವೇಳೆ, ಬೈಕ್‌ನ ಸೈಡ್ ಬ್ಯಾಗ್‌ನಲ್ಲಿ ಇಟ್ಟಿದ್ದ ಹಣವನ್ನು ಕಳ್ಳರು ಕ್ಷಣಾರ್ಧದಲ್ಲಿ ದೋಚಿ ಪರಾರಿಯಾಗಿದ್ದಾರೆ.ಕಳ್ಳರು ಹಣದ ಜೊತೆಗೆ ಅಗತ್ಯ ದಾಖಲೆಗಳನ್ನೂ ಕದ್ದೊಯ್ದಿದ್ದಾರೆ. ಬಳಿಕ ಹಣ ಇರಿಸಿದ್ದ ಬ್ಯಾಗ್ ಮಾತ್ರ ರೇಣುಕಾಪುರ ಸಮೀಪ ಪತ್ತೆಯಾಗಿದೆ. ಘಟನೆಯ ಸಂಬಂಧ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ, ಬೈಕ್‌ನಲ್ಲಿ ಬಂದಿದ್ದ ಇಬ್ಬರು ಆರೋಪಿಗಳ ಚಲನವಲನಗಳು ದಾಖಲಾಗಿರುವುದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ನಾಯಕನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

May 24, 2026 | 05:09 AM
48 0
ಹಣಕ್ಕಾಗಿ ವ್ಯಕ್ತಿಯನ್ನು ಅಪಹರಣ ಮಾಡಲು ಯತ್ನ – ಇಬ್ಬರ ಬಂಧನ

ಹಣಕ್ಕಾಗಿ ವ್ಯಕ್ತಿಯನ್ನು ಅಪಹರಣ ಮಾಡಲು ಯತ್ನ – ಇಬ್ಬರ ಬಂಧನ

ಬೆಂಗಳೂರು: ಹಣಕ್ಕಾಗಿ ವ್ಯಕ್ತಿಯನ್ನು ಅಪಹರಣ ಮಾಡಲು ಯತ್ನಿಸಿದ ಘಟನೆ ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.ಏರ್ಪೋರ್ಟ್ ಪ್ರದೇಶದಲ್ಲಿ ಉಬರ್ ಕಾರನ್ನು ಬುಕ್ ಮಾಡಿಕೊಂಡು ಬಂದಿದ್ದ ನಾಲ್ವರು ಆರೋಪಿಗಳು, ಬಾಗಲೂರು ಠಾಣೆ ವ್ಯಾಪ್ತಿಯಲ್ಲಿ ಕಾರನ್ನು ನಿಲ್ಲಿಸಲು ಚಾಲಕನಿಗೆ ಸೂಚಿಸಿದ್ದಾರೆ. ಬಳಿಕ ಚಾಲಕನಿಗೆ ಚಾಕು ತೋರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.ಈ ವೇಳೆ “ನನ್ನ ಬಳಿ ಹಣ ಇಲ್ಲ, ನನ್ನ ಸ್ನೇಹಿತನ ಬಳಿ ಇದೆ” ಎಂದು ಚಾಲಕ ಹೇಳಿದ್ದಾನೆ. ಆರೋಪಿಗಳು ನಂತರ ಆತನ ಸ್ನೇಹಿತನನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಆದರೆ ಸ್ಥಳಕ್ಕೆ ಬಂದ ಚಾಲಕನ ಸ್ನೇಹಿತ ಆರೋಪಿಗಳ ಕಣ್ತಪ್ಪಿಸಿ ತಪ್ಪಿಸಿಕೊಂಡಿದ್ದಾನೆ.ತಕ್ಷಣವೇ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಮಾಹಿತಿ ಪಡೆದ ಬಾಗಲೂರು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಅಪಹರಣಕ್ಕೊಳಗಾಗಿದ್ದ ವ್ಯಕ್ತಿಯನ್ನು ರಕ್ಷಿಸಿದ್ದಾರೆ.ಈ ವೇಳೆ ಪರಾರಿಯಾಗಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.ಪ್ರಕರಣ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

May 23, 2026 | 09:47 AM
82 0
ಚಿತ್ರದುರ್ಗದಲ್ಲಿ RSI ವಿರುದ್ಧ ಗಂಭೀರ ಆರೋಪ: ಮದುವೆಯ ಭರವಸೆ ನೀಡಿ ಯುವತಿಗೆ ಮೋಸ?

ಚಿತ್ರದುರ್ಗದಲ್ಲಿ RSI ವಿರುದ್ಧ ಗಂಭೀರ ಆರೋಪ: ಮದುವೆಯ ಭರವಸೆ ನೀಡಿ ಯುವತಿಗೆ ಮೋಸ?

ಚಿತ್ರದುರ್ಗ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿರುವ ಆರೋಪದ ಮೇಲೆ DAR ವಿಭಾಗದ RSI ವರುಣ್ ಕುಮಾರ್ ವಿರುದ್ಧ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ದಾವಣಗೆರೆ ಮೂಲದ ಪೂರ್ಣಿಮಾ ಎಂಬ ಯುವತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ನ್ಯಾಯಕ್ಕಾಗಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಗಿದೆ.ಸಂತ್ರಸ್ತೆಯ ಆರೋಪದ ಪ್ರಕಾರ, ಸುಮಾರು ಒಂದು ವರ್ಷದ ಹಿಂದೆ ಇನ್‌ಸ್ಟಾಗ್ರಾಂ ಮೂಲಕ ಪೂರ್ಣಿಮಾ ಹಾಗೂ RSI ವರುಣ್ ಕುಮಾರ್ ನಡುವೆ ಪರಿಚಯವಾಗಿತ್ತು. ಆ ಬಳಿಕ ಇಬ್ಬರ ಮಧ್ಯೆ ಸ್ನೇಹ ಬೆಳೆದು ಪ್ರೀತಿಗೆ ತಿರುಗಿತ್ತು. ಆ ಸಂದರ್ಭದಲ್ಲಿ ಪೂರ್ಣಿಮಾ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ವರುಣ್ ಕುಮಾರ್ ಪೊಲೀಸ್ ತರಬೇತಿಗಾಗಿ ಬೆಂಗಳೂರಿಗೆ ತೆರಳಿದ್ದನು ಎನ್ನಲಾಗಿದೆ.ಮದುವೆಯಾಗುವುದಾಗಿ ನಂಬಿಸಿ ನಿರಂತರವಾಗಿ ಲೈಂಗಿಕ ಸಂಬಂಧ ಬೆಳೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ. ಇದೇ ವೇಳೆ ತನ್ನೊಂದಿಗೆ ಇದ್ದ ಸಮಯದಲ್ಲಿ ಗರ್ಭಿಣಿಯಾಗಿದ್ದಾಗಿ ಹೇಳಿರುವ ಯುವತಿ, ಮದುವೆ ವಿಚಾರವಾಗಿ ಒತ್ತಾಯಿಸಿದಾಗ ಆರೋಪಿ ಗರ್ಭಪಾತ ಮಾತ್ರೆ ನೀಡಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದಾಳೆ.ಈ ಸಂಬಂಧ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, FIR ದಾಖಲಾಗುತ್ತಿದ್ದಂತೆಯೇ RSI ವರುಣ್ ಕುಮಾರ್ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ.ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಯನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂತ್ರಸ್ತ ಯುವತಿ ಒತ್ತಾಯಿಸಿದ್ದಾಳೆ.

May 16, 2026 | 10:29 AM
104 0
ರಾಮನಗರದಲ್ಲಿ ಅಪ್ರಾಪ್ತ ಬಾಲಕಿಯರ ವಿಡಿಯೋ ಚಿತ್ರೀಕರಿಸಿ ಆನ್‌ಲೈನ್‌ಗೆ ಅಪ್ಲೋಡ್: ಇಬ್ಬರ ಬಂಧನ

ರಾಮನಗರದಲ್ಲಿ ಅಪ್ರಾಪ್ತ ಬಾಲಕಿಯರ ವಿಡಿಯೋ ಚಿತ್ರೀಕರಿಸಿ ಆನ್‌ಲೈನ್‌ಗೆ ಅಪ್ಲೋಡ್: ಇಬ್ಬರ ಬಂಧನ

ರಾಮನಗರ: ಅಪ್ರಾಪ್ತ ಬಾಲಕಿಯರನ್ನು ಪರಿಚಯ ಮಾಡಿಕೊಂಡು ಲೈಂಗಿಕ ಕಿರುಕುಳ ನೀಡಿ, ಅದರ ವಿಡಿಯೋಗಳನ್ನು ಚಿತ್ರೀಕರಿಸಿ ಆನ್‌ಲೈನ್‌ಗೆ ಅಪ್ಲೋಡ್ ಮಾಡಿದ್ದ ಆರೋಪದಡಿ ಇಬ್ಬರನ್ನು ರಾಮನಗರ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಕಗ್ಗಲೀಪುರ ಮೂಲದ ಕಿರಣ್ ಕುಮಾರ್ ಹಾಗೂ ಆದಿತ್ಯ ಎಂದು ಗುರುತಿಸಲಾಗಿದೆ.ಆರೋಪಿಗಳು ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್‌ನಲ್ಲಿ ಈಜುಕೊಳ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಕುರಿಗಾಯಿ ಬಾಲಕಿಯರೊಂದಿಗೆ ಪರಿಚಯ ಬೆಳೆಸಿ, ಅವರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.ಅಲ್ಲದೆ, ಕೃತ್ಯವನ್ನು ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿ, ಬಳಿಕ ಅದನ್ನು ಆನ್‌ಲೈನ್‌ನಲ್ಲಿ ಅಪ್ಲೋಡ್ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಈ ಕುರಿತು ಎನ್‌ಸಿಆರ್‌ಪಿ ಪೋರ್ಟಲ್‌ಗೆ ಮಾಹಿತಿ ಬಂದ ಹಿನ್ನೆಲೆ ರಾಮನಗರ ಸಿಇಎನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ತನಿಖೆ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಪ್ರಕರಣ ಸಂಬಂಧ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

May 15, 2026 | 10:47 AM
147 0
ಸಂಶಯದ ಕಿಚ್ಚಿಗೆ ಬಲಿಯಾದ ಮಹಿಳೆ; ಮಚ್ಚಿನಿಂದ ಕೈ, ತಲೆ ಕೊಚ್ಚಿ ಹತ್ಯೆ

ಸಂಶಯದ ಕಿಚ್ಚಿಗೆ ಬಲಿಯಾದ ಮಹಿಳೆ; ಮಚ್ಚಿನಿಂದ ಕೈ, ತಲೆ ಕೊಚ್ಚಿ ಹತ್ಯೆ

ಕೋಲಾರ: ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಿನ್ನದ ಗಣಿ ಗ್ರಾಮದ ಬಳಿ ಬುಧವಾರ ಅತ್ಯಂತ ದಾರುಣ ಘಟನೆಯೊಂದು ನಡೆದಿದೆ. ಹೆಂಡತಿಯ ಶೀಲದ ಮೇಲೆ ಸಂಶಯಪಟ್ಟ ಪತಿಯೊಬ್ಬ ಆಕೆಯನ್ನೇ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.ಪ್ರಾಪ್ತ ಮಾಹಿತಿಯ ಪ್ರಕಾರ, ಆಂಧ್ರಪ್ರದೇಶದ ಪೆದ್ದೂರು ಮೂಲದ ಗೋಪಿನಾಥ (ಆರೋಪಿ) ತನ್ನ ಪತ್ನಿ ಈಶ್ವರಮ್ಮನ ಶೀಲದ ಬಗ್ಗೆ ಮೊದಲಿನಿಂದಲೂ ಅನುಮಾನ ಹೊಂದಿದ್ದ. ಈಶ್ವರಮ್ಮ ಬಂಗಾರಪೇಟೆಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದಳು.ಆದರೆ ವಾಪಸ್ ಬರುವ ದಾರಿಯುದ್ದಕ್ಕೂ ಪತಿ-ಪತ್ನಿಯ ನಡುವೆ ತೀವ್ರ ಜಗಳ ನಡೆದಿದೆ. ಈ ವೇಳೆಗಾಗಲೇ ಶೀಲದ ಬಗ್ಗೆ ಸಂಶಯ ಹೊಂದಿದ್ದ ಪತಿ ಗೋಪಿನಾಥ್ ಆಕ್ರೋಶಗೊಂಡು, ಕೈಯಲ್ಲಿದ್ದ ಮಚ್ಚಿನಿಂದ ತನ್ನ ಹೆಂಡತಿ ಈಶ್ವರಮ್ಮನ ಎರಡೂ ಕೈ ಮತ್ತು ತಲೆಗೆ ಬರ್ಬರವಾಗಿ ಹಲ್ಲೆ ನಡೆಸಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಈಶ್ವರಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.ಘಟನಾ ಸ್ಥಳಕ್ಕೆ ಊರಿಗಾಂ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಗೋಪಿನಾಥನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಊರಿಗಾಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Apr 24, 2026 | 11:41 AM
248 0