ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿ ಮುಖ್ಯಮಂತ್ರಿ ಅಧಿಕಾರ ವಹಿಸಿಕೊಳ್ಳಲಿದ್ದು, ಹಾಲಿ ಸಿಎಂ ನಿತೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಸಿಎಂ ರೇಸ್‌ನಲ್ಲಿದ್ದು, ನಿತೀಶ್ ಪುತ್ರ ಉಪಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ.
ಹಿಂದಿ ಭಾಷಿಕ ಪ್ರದೇಶಗಳ ಪೈಕಿ ಇದುವರೆಗೂ ಬಿಜೆಪಿ ಮುಖ್ಯಮಂತ್ರಿ ಕಾಣದ ಏಕೈಕ ರಾಜ್ಯವಾಗಿದ್ದ ಬಿಹಾರ, ಮಂಗಳವಾರ ಮೊದಲ ಬಿಜೆಪಿ ಮುಖ್ಯಮಂತ್ರಿ ಆಯ್ಕೆಗೆ ಸಾಕ್ಷಿಯಾಗಲಿದೆ. ಹಾಲಿ ಮುಖ್ಯಮಂತ್ರಿ, ಜೆಡಿಯು ನಾಯಕ ನಿತೀಶ್ ಕುಮಾರ್ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಬಳಿಕ ಸರ್ಕಾರದ ನೇತೃತ್ವವನ್ನು ಬಿಜೆಪಿ ಮೊದಲ ಬಾರಿಗೆ ವಹಿಸಿಕೊಳ್ಳಲಿದೆ. ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ.
Image Gallery
Get Latest Updates!
Enable notifications to receive the latest news alerts directly on your device.